ಗುಂಡ್ಲುಪೇಟೆ: ಅಕ್ರಮ ಗೋ ಸಾಗಾಣಿಕೆ ಪ್ರಕರಣ ಭೇದಿಸಿದ ಬೇಗೂರು ಪೊಲೀಸರು:ಎರಡು ಜಾನುವಾರುಗಳು ವಶಕ್ಕೆ,
ಗುಂಡ್ಲುಪೇಟೆ ತಾಲೂಕಿನ ಬೆಟ್ಟದಮಾದನಹಳ್ಳಿ ಹಾಗೂ ಹಸಗೂಲಿ ಮಾರ್ಗವಾಗಿ ಅಕ್ರಮವಾಗಿ ಗೋ ಸಾಗಾಣಿಕೆ ಮಾಡುತ್ತಿದ್ದ ಪ್ರಕರಣವನ್ನು ಬೇಗೂರು ಪೊಲೀಸ್ ಠಾಣೆಯ ಪೊಲೀಸರು ಭೇದಿಸಿದ್ದಾರೆ. ಜಾನುವಾರುಗಳನ್ನು ತಮಿಳುನಾಡಿನ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಗುಂಡ್ಲುಪೇಟೆ ಪಟ್ಟಣದ ಮೊಕ್ಷುಲ್ ಪಾಷ ಮತ್ತು ಮೊಹಮ್ಮದ್ ಸಾದಾಬ್ ಎಂಬವರನ್ನು ಬಂಧಿಸಿದ್ದಾರೆ. ಇಬ್ಬರಿಂದ ಎರಡು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಠಾಣೆಗೆ ಕರೆದೊಯ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಜಾರಿಯಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.