ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್ ಅವರು ಸಾರ್ವಜನಿಕರ ಜೊತೆ ಮಾತನಾಡಿದರು. ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, "ಎ ಖಾತಾ ನಿಮ್ಮ ಆಸ್ತಿ ದಾಖಲೆ.