ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದಲ್ಲಿ 5 ಹುಲಿ ಪತ್ತೆಯಾದ ಪ್ರಕರಣ ಸಂಬಂಧ ಶಾಸಕ ಸಿ.ಪುಟ್ಟರಂಗಶೆಟ್ಟಿ ನಂಜದೇವನಪುರ ಗ್ರಾಮಕ್ಕೆ ಸೋಮವಾರ ಭೇಟಿಕೊಟ್ಟು ಕಾರ್ಯಾಚರಣೆ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಫೋನ್ ಮಾಡಿ ಸಮಸ್ಯೆ ತೆರೆದಿಟ್ಟ ಶಾಸಕರು, ನಂಜದೇವನಪುರದಲ್ಲಿ 5 ಹುಲಿ ಪ್ರತ್ಯಕ್ಷವಾದ ಬಳಿಕ ಜನರು ತೀರಾ ಆತಂಕಕ್ಕೆ ಒಳಗಾಗಿದ್ದಾರೆ. ಹೆಚ್ಚುವರಿ ವೈದ್ಯರು ಹಾಗೂ ತಜ್ಞರನ್ನು ಕಳುಹಿಸುವಂತೆ ಮನವಿ ಮಾಡಿದರು. ಶಾಸಕ ಪುಟ್ಟರಂಗಶೆಟ್ಟಿ ಮಾತಿಗೆ ಸಹಮತ ನೀಡಿದ ಸಿಎಂ ಸಿದ್ದರಾಮಯ್ಯ, ಈಗಲೇ ಅರಣ್ಯ ಸಚಿವರ ಜೊತೆ ಮಾತನಾಡುತ್ತೇನೆಂದು ಭರವಸೆ ಕೊಟ್ಟರು.