ಹನೂರು:ತಾಲೂಕಿನ ಅಜ್ಜಿಪುರ ಗ್ರಾಮದ ಪ್ರವೇಶದ್ವಾರದ ಬಳಿ ಕುಂಠಿತವಾಗಿ ಸಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪರಿಣಾಮವಾಗಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾದ ಘಟನೆ ನಡೆದಿದೆ. ಎಂ.ಜಿ. ದೊಡ್ಡಿ ಗ್ರಾಮದ ವ್ಯಾಪಾರಿಯೋರ್ವರು ಗ್ರಾಮಾಂತರ ಪ್ರದೇಶಗಳಿಗೆ ವ್ಯಾಪಾರಕ್ಕಾಗಿ ಸಾಮಾಗ್ರಿಗಳನ್ನು ತುಂಬಿಕೊಂಡು ತೆರಳುತ್ತಿದ್ದಾಗ, ಅಜ್ಜಿಪುರದ ಮುಖ್ಯರಸ್ತೆಯಲ್ಲಿರುವ ಗ್ರಾಮ ದೇವತೆ ದೇವಸ್ಥಾನದ ಬಳಿ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಅಪಘಾತವನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಆಗಮಿಸಿ, ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಮೇಲಕ್ಕೆತ್ತಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.