ಬೆಂಗಳೂರು ಉತ್ತರ: ಲಾಲ್‌ಬಾಗ್‌ನಲ್ಲಿ ಸುರಂಗ ರಸ್ತೆ ಯೋಜನೆ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಸರಕಾರದ ಟನಲ್ ಯೋಜನೆ ವಿರುದ್ಧ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನದ ಮೂಲಕ ಭಾನುವಾರ ಲಾಲ್ ಬಾಗ್ ಗುಡ್ಡದ ಮೇಲೆ ಪ್ರತಿಭಟನೆ ನಡೆಸಿದರು. ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆ ಅಡಿಯಲ್ಲಿ ಅಭಿಯಾನ ಆರಂಭಿಸಲಾಗಿದೆ. ವಿಪಕ್ಷ ನಾಯಕ ಅಶೋಕ್, ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಸಹಿ ಮಾಡುವುದರ ಮೂಲಕ ಆರ್ ಅಶೋಕ್, ಸಂಸದ ತೇಜಸ್ವಿ ಸೂರ್ಯ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಲಾಲ್‌ಬಾಗ್ ಗುಡ್ಡದ ಮೇಲೆ ಜನರ ಜೊತೆ ಬಿಜೆಪಿ ನಾಯಕರು ಕುಳಿತ ಅಭಿಯಾನ ನಡೆಸಿದರು.