ಹುಬ್ಬಳ್ಳಿ ನಗರ: ಸೆ. ೧೯ ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ: ನಗರದಲ್ಲಿ ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳ ಹೇಳಿಕೆ
ಹುಬ್ಬಳ್ಳಿ:ನಗರದ ನೆಹರೂ ಮೈದಾನದಲ್ಲಿ ಸೆ. ೧೯ ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇದು ಶಕ್ತಿ ಪ್ರದರ್ಶನವಲ್ಲ, ಸಮಾಜದ ಸಂಘಟನಾ ಸಮಾವೇಶ ಎಂದು ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವನ ಒಡೆಯುವ ಶಕ್ತಿಗಳ ವಿರುದ್ಧ ಜನರಲ್ಲಿ ಗೊಂದಲ ನಿವಾರಿಸಿ ಸಮಾಜವನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.