ಚಿತ್ರದುರ್ಗ: ದಲಿತರ, ಆದಿವಾಸಿಗಳ, ಮಹಿಳೆಯರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ನಗರದಲ್ಲಿಂದು ಜಿಲ್ಲಾಧಿಕಾರಿಗೆ ಮನವಿ
ದಲಿತರ, ಆದಿವಾಸಿಗಳ, ಮಹಿಳೆಯರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಭಾರತ್ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಲಾಯಿತು. ಇನ್ನೂ ಶತಶತಮಾನಗಳಿಂದಲೂ ದಬ್ಬಾಳಿಕೆ, ಅಸ್ಪಶ್ಯತೆ ಮತ್ತು ಶೋಷಣೆಗಳಿಗೆ ಬಲಿಯಾದ ದಲಿತ, ಆದಿವಾಸಿ ಮತ್ತು ಮಹಿಳಾ ಸಮುದಾಯಗಳು ಇಂದಿಗೂ ಈ ದೌರ್ಜನ್ಯಗಳಿಂದ ಬಿಡುಗಡೆಯಾಗಿಲ್ಲ. ಬದಲಿಗೆ ಇಂದಿಗೂ ಕೂಡ ಅವುಗಳು ಅವ್ಯಾಹತವಾಗಿ ಮುಂದುವರೆಯುತ್ತಿವೆ ಎಂದು ಆರೋಪಿಸಿದ್ದಾರೆ