ಭದ್ರಾವತಿ: ಜಾತಿ ನಿಂದನೆ ನಾಲ್ವರಿಗೆ ಎರಡು ವರ್ಷ ಜೈಲು ಶಿಕ್ಷೆ, ತಲಾ 77 ಸಾವಿರ ತಂಡ ವಿಧಿಸಿಸ ಭದ್ರಾವತಿ ಕೋರ್ಟ್
ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದಲ್ಲಿ ಜಾತಿ ನಿಂದನೆ ಮಾಡಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಗಳಿಗೆ ಭದ್ರಾವತಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಹಾಗೂ ತಲಾ 77 ಸಾವಿರ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಆನವೇರಿ ಗ್ರಾಮದ ತಿಮ್ಮಪ್ಪ ಎಂಬುವರಿಗೆ ಅದೇ ಗ್ರಾಮದ ರಾಜಪ್ಪ, ಭರತ್, ರಂಗನಾಥ್ ಹಾಗೂ ಹನುಮಂತಪ್ಪ ಎಂಬುವರು ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ರು. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದರು. ಭದ್ರಾವತಿ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 77 ಸಾವಿರ ದಂಡ ವಿಧಿಸಿದೆ.