ಇಳಕಲ್: ಹಿರೇಶಿವನಗುತ್ತಿ ಗ್ರಾಮದಲ್ಲಿ ಸಂಭ್ರಮದಿಂದ ನಡೆದ ದುರ್ಗಾ ದೇವಿ ಜಾತ್ರಾ ಮಹೋತ್ಸವ
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಶಿವನಗುತ್ತಿ ಗ್ರಾಮದಲ್ಲಿ ಗ್ರಾಮದೇವತೆ ದುರ್ಗಾ ದೇವಿ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿAದ ಅ.೦೨ ಸಾಯಂಕಾಲ ೭ ಗಂಟೆಗೆ ನಡೆಯಿತು. ದೇವಿಗೆ ವಿಶೇಷ ಪೂಜೆ ಅಭಿಷೇಕ ನಡೆದವು. ಸಾಯಂಕಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ದುರ್ಗಾ ದೇವಿ ಮೂರ್ತಿಯನ್ನು ಮೆರವಣಿಗೆ ಮಾಡಿದರು. ಗ್ರಾಮದ ಭಕ್ತರು ದೇವಿಯ ಆಶೀರ್ವಾದವನ್ನು ಪಡೆದುಕೊಂಡರು.