ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ತಾಲೂಕು ಆಸ್ಪತ್ರೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಭೇಟಿ ನೀಡಿ ಚಾಕು ಇರಿತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಅನ್ನು ಭೇಟಿ ಮಾಡಿ, ಆರೋಗ್ಯವನ್ನು ವಿಚಾರಿಸಿದರು. ನಿನ್ನೆ ತೇರಂಬಳ್ಳಿ ಗ್ರಾಮದಲ್ಲಿ ರಾಜಣ್ಣ ಎಂಬ ವ್ಯಕ್ತಿ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಗೆ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದರು.