ಹುಬ್ಬಳ್ಳಿ: ಹುಬ್ಬಳ್ಳಿಯ ರಿಂಗ್ ರಸ್ತೆಯಲ್ಲಿ ಸ್ಕೂಟರ್ನಲ್ಲಿ ಬಂದ ಮೂವರು ಕಳ್ಳರು ಲಾರಿ ನಿಲ್ಲಿಸಿ ಡ್ರೈವರ್ ಗೆ ಬೆದರಿಕೆ ಹಾಕಿ ಆತನ ಬಳಿಯಿದ್ದ 30,ಸಾವಿರ ಹಣ ದೋಚಿ ಪರಾರಿಯಾದ ಪ್ರಕರಣದಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹಣ ದೋಚಿದ ಕುರಿತು ಹುಬ್ಬಳ್ಳಿ ಬೆಂಡಿಗೇರಿ ಠಾಣೆ ಪೋಲಿಸರು ಪ್ರಕರಣ ದಾಖಲಾಗಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಕಳ್ಳರನ್ನ ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಅಮೀತ, ವಿಶಾಲ, ರಾಕೇಶ ಬಂಧಿತ ಆರೋಪಿಗಳು.