ಬೆಂಗಳೂರು ಪೂರ್ವ: ಗುಂಡಿ ಮುಕ್ತ ರಸ್ತೆಗಳು, ಹಾಗೂ ಸ್ವಚ್ಚತೆಗೆ ಪ್ರಥಮ ಆದ್ಯತೆ: ನಗರದಲ್ಲಿ ರಾಜೇಂದ್ರ ಚೋಳನ್
ಸಿಎಂ ಸಿದ್ದರಾಮಯ್ಯ ಅವರ ಆದೇಶ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನೀಡಿದ ಸೂಚನೆಯಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುಂಡಿಮುಕ್ತ ರಸ್ತೆಗಳನ್ನಾಗಿಸಲು ಪ್ರಥಮ ಆದ್ಯತೆ ಮೇಲೆ ರಸ್ತೆ ಗುಂಡಿಗಳನ್ನು ಮುಚ್ಚುವುದು, ಪ್ರಮುಖ ರಸ್ತಗೆಗಳಿಗೆ ಡಾಂಬರೀಕರಣ, ಸಿ.ಸಿ. ರಸ್ತೆ ನಿರ್ಮಾಣ ಮಾಡುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದರು. ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಿ.ವಿ ರಾಮನ್ ನಗರ ಕ್ಷೇತ್ರದ ಜಿಎಂ ಪಾಳ್ಯ ಮುಖ್ಯ ರಸ್ತೆಯಲ್ಲಿ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ನಡೆಯುತ್ತಿರುವ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಪರಿಶೀಲನೆ ನಡೆಸಿದರು.