ಸೇಡಂ: ಪಟ್ಟಣದಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹಕ್ಕೆ ಸಚಿವ ಶರಣಪ್ರಕಾಶ ಪಾಟೀಲ್ ಚಾಲನೆ
ಸೇಡಂ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಖುದ್ದಾಗಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ಮತದಾನ ಪ್ರಜಾಪ್ರಭುತ್ವದ ಪವಿತ್ರ ಸಾಧನವಾಗಿದ್ದು, ಕೇಂದ್ರ ಸರ್ಕಾರವು ಅದರ ದುರುಪಯೋಗದ ಮೂಲಕ ಜನರ ವಿಶ್ವಾಸಕ್ಕೆ ದ್ರೋಹ ಮಾಡಿದೆ ಎಂದು ಆರೋಪಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಸೋಮವಾರ ಹತ್ತು ಗಂಟೆಗೆ ಈ ಕಾರ್ಯಕ್ರಮ ಜರಗಿತು...