ಗಾಂಜಾ ಮಾರಾಟ, ಓರ್ವ ಆರೋಪಿ ಸೆರೆ, ಮಾಲು ವಶಕ್ಕೆ ಪಡೆದ ಬೆಮೆಲ್ ನಗರ ಪೋಲಿಸರು ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ಬೆಮೆಲ್ ನಗರ ಪೊಲೀಸರು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ರೂ.೮೦,೦೦೦/- ಮೌಲ್ಯದ ೮೫೫ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೆಮೆಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರಂ ಗ್ರಾಮದ ರಸ್ತೆಯ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿಯನ್ನು ಆಧರಿಸಿ, ಬೆಮೆಲ್ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಮಾಲಾ.ಜಿ ಮತ್ತು ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಮಾಲೂರು ತಾಲ್ಲೂಕಿನ ಚಿಕ್ಕಾಪುರ ಗ್ರಾಮದ ವಾಸಿ ವೆಂಕಟ